×
Ad

ಸಚಿವ ಸಂಪುಟ ಪುನಾರಚನೆ ಕೇವಲ ವದಂತಿ: ಡಿ.ಕೆ.ಶಿವಕುಮಾರ್

Update: 2025-10-11 15:03 IST

ಬೆಂಗಳೂರು: "ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಅಥವಾ ನಾನು ಪ್ರಸ್ತಾವ ಮಾಡಬೇಕು. ನಾವಿಬ್ಬರೂ ಪ್ರಸ್ತಾವ ಮಾಡಲಿಲ್ಲವಾದರೆ ಅದು ಗಾಳಿ ಸುದ್ದಿ. ಆತುರದಲ್ಲಿರುವವರು, ಮಾಧ್ಯಮಗಳ ಮುಂದೆ ಮಾತನಾಡುತ್ತಾರೆ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಲಾಲ್ ಬಾಗ್ ನಲ್ಲಿ ನಾಗರಿಕರ ಜೊತೆ ನಡಿಗೆ ಹಾಗೂ ಸಂವಾದದ ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, "ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಅಧಿಕಾರವೂ ಇಲ್ಲ. ಮಾಧ್ಯಮಗಳು ಗಾಳಿ ಸುದ್ದಿ ಪ್ರಕಟಿಸುತ್ತಿವೆ'' ಎಂದು ಹೇಳಿದರು.

ಸಿಎಂ ಸಭೆ ಬಗ್ಗೆ ಕೇಳಿದಾಗ, "ಮುಂದೆ ಪಾಲಿಕೆಗಳು, ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತಾರೆ. ನಾನು ಕೂಡ ಇಂದು ಜಿಬಿಎ ಪಾಲಿಕೆಗಳ ಚುನಾವಣೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕರ್ತರ ಸಭೆ ಮಾಡುತ್ತಿದ್ದೇನೆ" ಎಂದು ತಿಳಿಸಿದರು.

ಪಾಲಿಕೆಗಳಲ್ಲಿ ಸಿಬ್ಬಂದಿ ಹಾಗೂ ಕಟ್ಟಡ ಸಮಸ್ಯೆ ಬಗ್ಗೆ ಕೇಳಿದಾಗ, "ಈ ಎಲ್ಲಾ ವ್ಯವಸ್ಥೆ ಮಾಡಲಾಗುವುದು. ಕಟ್ಟಡ ನಿರ್ಮಾಣಕ್ಕೆ ಜಾಗಗಳು ಗುರುತಿಸಲಾಗಿದ್ದು, ಎರಡು ವರ್ಷಗಳಲ್ಲಿ ನಿರ್ಮಾಣ ಮಾಡುತ್ತೇವೆ. ಅಲ್ಲಿಯವರೆಗೂ ಬಾಡಿಗೆ ಕಟ್ಟಡದಲ್ಲಾದರೂ ವ್ಯವಸ್ಥೆ ಮಾಡುತ್ತೇವೆ" ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News