×
Ad

ಮಂಡ್ಯ ಕ್ಷೇತ್ರದ ಅಭ್ಯರ್ಥಿ ಇನ್ನೂ ಅಂತಿಮ ಆಗಿಲ್ಲ: ಸಂಸದೆ ಸುಮಲತಾ

Update: 2024-03-20 20:29 IST

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಹೊಸದಿಲ್ಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ಮಾಡಿದ್ದು, ಇನ್ನೂ ಅಭ್ಯರ್ಥಿ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎಂದು ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಇಂದಿಲ್ಲಿ ಪ್ರತಿಕ್ರಿಯಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬುಧವಾರ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ರಾಜಕೀಯ ಮಾಡಿದರೆ, ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ಮಾಡುತ್ತೇನೆ. ಈಗಲೂ ನಾನು ಅದನ್ನೆ ಹೇಳುತ್ತಿದ್ದೇನೆ. ಬೇರೆಯವರು ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಉತ್ತರ ಎಂದು ಹೇಳುತ್ತಿದ್ದಾರೆ ಎಂದು ವಿವರಣೆ ನೀಡಿದರು.

‘ಪ್ರಧಾನಿ ಮೋದಿಯವರೇ ಕರೆ ಮಾಡಿ ನನ್ನನ್ನ ಕರೆಸಿ, ಮಾತನಾಡಿ ಎಂದು ಹೇಳಿದ್ದರು. ಹೀಗಾಗಿ ನನ್ನನ್ನ ಕರೆಸಿದ್ದ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದ್ದಾರೆ. ಪಕ್ಷದಲ್ಲಿ ನನ್ನ ಬಗ್ಗೆ ತುಂಬಾ ಗೌರವವಿದ್ದು, ಪಕ್ಷದಲ್ಲಿರಬೇಕು ಎಂದು ಹೇಳಿದ್ದಾರೆ. ನನ್ನ ಪರವಾಗಿ ಫಲಿತಾಂಶದ ನಿರೀಕ್ಷೆಯಲ್ಲಿದ್ದು, ವರಿಷ್ಠರು ಯಾವ ತೀರ್ಮಾನ ಕೈಗೊಳ್ಳಲಿದ್ದಾರೆಂಬುದನ್ನು ಕಾದು ನೋಡೋಣ’ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News