×
Ad

ಚಾಮರಾಜನಗರ | ಗ್ಯಾಸ್‌ ಸಿಲಿಂಡರ್‌ ಸ್ಫೋಟ; ಮನೆಯಲ್ಲಿ ಯಾರೂ ಇಲ್ಲದ್ದರಿಂದ ತಪ್ಪಿದ ಭಾರಿ ಅನಾಹುತ

Update: 2025-02-07 22:37 IST

ಚಾಮರಾಜನಗರ : ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಅಡಿಗೆ ಮನೆಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡ ಘಟನೆ ಚಾಮರಾಜನಗರ ತಾಲ್ಲೂಕಿನ ಬಾಣಹಳ್ಳಿಯಲ್ಲಿ ನಡೆದಿದೆ.

ಚಾಮರಾಜನಗರ ತಾಲ್ಲೂಕಿನ ಬಾಣಹಳ್ಳಿ ಗ್ರಾಮದ ಗುರುಪಾದಸ್ವಾಮಿ ಅವರ ಮನೆಯಲ್ಲಿನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಕಾಣಿಸಿಕೊಂಡು ಮನೆಯಂಗಳ ಸೇರಿದಂತೆ ಇನ್ನಿತರ ವಸ್ತುಗಳು ಬೆಂಕಿಗಾಹುತಿಯಾದವು.

ಮನೆಯಲ್ಲಿ ಯಾರೂ ಇಲ್ಲದ ಹಿನ್ನಲೆಯಲ್ಲಿ ಹೆಚ್ಚಿನ ಅನಾಹುತವಾಗಿಲ್ಲ. ಬೆಂಕಿ ಕಾಣಿಸಿಕೊಂಡಿದ್ದರಿಂದ ಅಗ್ನಿಶಾಮಕ ದಳದವರು ಆಗಮಿಸಿ ನೆರೆಹೊರೆಯವರ ಸಹಕಾರದೊಂದಿಗೆ ಬೆಂಕಿ ನಂದಿಸಿದರು. ಮನೆಯ ಮೇಲ್ಛಾವಣೆ ಮತ್ತು ಬಾಗಿಲು, ಮರದ ಮೇಲ್ಛಾವಣೆಗಳು ಬೆಂಕಿಗಾಹುತಿಯಾದವು. ಸಂತೇಮರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News