ಚಾಂಪಿಯನ್ ಟ್ರೋಫಿ | ಪಾಕಿಸ್ತಾನ ವಿರುದ್ಧ ಭಾರತದ ಗೆಲುವಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆ
PC |@BCCI,
ಸಿದ್ಧರಾಮಯ್ಯ
ಬೆಂಗಳೂರು : ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ಗೆಲುವಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನ ವಿರುದ್ಧದ ಇಂದಿನ ಅಭೂತಪೂರ್ವ ಗೆಲುವನ್ನು ನೋಡಿ ಆನಂದಿಸಿದೆ. ಭಾರತದ ಲಯಬದ್ಧ ಬೌಲಿಂಗ್, ವಿರಾಟ್ ಕೊಹ್ಲಿಯ ಅಮೋಘ ಬ್ಯಾಟಿಂಗ್, ತಂಡದ ಸಂಘಟಿತ ಹೋರಾಟ ಪಾಕಿಸ್ತಾನವನ್ನು ಬಗ್ಗುಬಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದ್ದಾರೆ.
ಜಯದ ನಗೆ ಬೀರಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ನಮ್ಮವರ ಈ ಗೆಲುವಿನ ಓಟ ಪಂದ್ಯಾವಳಿಯುದ್ದಕ್ಕೂ ಹೀಗೆಯೇ ಮುಂದುವರೆಯಲಿ, ಭಾರತ ಚಾಂಪಿಯನ್ ಆಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಶುಭಹಾರೈಸಿದ್ದಾರೆ.
ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನ ವಿರುದ್ಧದ ಇಂದಿನ ಅಭೂತಪೂರ್ವ ಗೆಲುವನ್ನು ನೋಡಿ ಆನಂದಿಸಿದೆ. ಭಾರತದ ಲಯಬದ್ಧ ಬೌಲಿಂಗ್, ವಿರಾಟ್ ಕೊಹ್ಲಿಯ ಅಮೋಘ ಬ್ಯಾಟಿಂಗ್, ತಂಡದ ಸಂಘಟಿತ ಹೋರಾಟ ಪಾಕಿಸ್ತಾನವನ್ನು ಬಗ್ಗುಬಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ.ಜಯದ ನಗೆ ಬೀರಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ನಮ್ಮವರ ಈ… pic.twitter.com/I0eLnaqlJV
— Siddaramaiah (@siddaramaiah) February 23, 2025