×
Ad

ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಸಾಧ್ಯತೆ : ಮೂರು ದಿನ ಚಳಿಯ ವಾತಾವರಣ

Update: 2024-11-30 19:51 IST

PC | PTI

ಬೆಂಗಳೂರು : ಕರ್ನಾಟಕದಲ್ಲಿ ಶನಿವಾರ ಮತ್ತು ರವಿವಾರ ಮಿಶ್ರ ಹವಾಮಾನ ಇರಲಿದ್ದು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿ 7 ಜಿಲ್ಲೆಗಳಲ್ಲಿ ಹಗುರ ಅಥವಾ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಸೃಷ್ಟಿಯಾಗಿರುವ ಪರಿಣಾಮ ಮಳೆಯಾಗುವ ಸಾಧ್ಯತೆಗಳಿವೆ. ಮುನ್ಸೂಚನೆ ಪ್ರಕಾರ ತಮಿಳುನಾಡು, ಕೇರಳ ಗಡಿ ಭಾಗದ ರಾಜ್ಯದ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಇನ್ನೂ ಎರಡು ಮೂರು ದಿನ ಮಳೆ ಬರುವ ಸಾಧ್ಯತೆಗಳಿವೆ. ಉತ್ತರ ಒಳನಾಡು ಭಾಗದಲ್ಲಿ ತಾಪಮಾನ ಇಳಿಕೆ ಮತ್ತು ತೇವಾಂಶ ಕಡಿಮೆಯಾಗಿ ಒಣಹವೆ ಇರಲಿದೆ.

ದಕ್ಷಿಣ ಕರ್ನಾಟಕದ ಒಳನಾಡು ಭಾಗದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ರಾಮನಗರ, ತುಮಕೂರು ಭಾಗದಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತೇವಾಂಶ ಕುಸಿತವಾಗಿದ್ದು, ಒಣಹವೆ ಇರಲಿದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರಲಿದೆ. ವಿಜಯಪುರ, ಬೀದರ್ ಭಾಗದಲ್ಲಿ ರಾತ್ರಿ ಮತ್ತು ಬೆಳಗ್ಗೆ ಚಳಿ ಹೆಚ್ಚಾಗಲಿದೆ. ಬಳಿಕ ಒಣಹವೆ ಇರಲಿದೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News