×
Ad

‘ನಮ್ಮ ಜಾತ್ರೆ’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

Update: 2024-11-30 22:01 IST

ಬೆಂಗಳೂರು : ರಾಜ್ಯದ ಸಂಸ್ಕೃತಿ, ಸಂಪ್ರದಾಯವನ್ನು ಬಿಂಬಿಸುವ ‘ನಮ್ಮ ಜಾತ್ರೆ'ಗೆ ವಿಧಾನಸೌಧದ ಮುಂಭಾಗದಲ್ಲಿರುವ ಬೃಹತ್ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಚಾಲನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ವಸತಿ ಸಚಿವ ಝಮೀರ್ ಅಹ್ಮದ್ ಖಾನ್, ಶಾಸಕ ರಿಝ್ವಾನ್ ಅರ್ಶದ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ವಿಧಾನಪರಿಷತ್ ಸದಸ್ಯ ನಾಗರಾಜ್ ಯಾದವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಡೊಳ್ಳು ಕುಣಿತ, ಯಕ್ಷಗಾನ, ವೀರಗಾಸೆ, ಕಂಸಳೆ, ಹುಲಿ ವೇಷ, ಮಲ್ಲಕಂಬ, ನೃತ್ಯ, ನಗಾರಿ, ಗೊರವರ ಕುಣಿತ, ದಟ್ಟಿ ಕುಣಿತ, ಕೋಲಾಟ, ಸಿದ್ದಿ ಕುಣಿತ, ನಂದಿಧ್ವಜ, ಜಗ್ಗಲಗಿ, ಕೀಲು ಕುದುರೆ, ಗಾರುಡಿ ಗೊಂಬೆ, ಹಾಲಕ್ಕಿ ಕುಣಿತ, ಚಿಲಿಪಿಲಿ ಗೊಂಬೆ, ಮಹಿಳಾ ನಗಾರಿ, ಮರಗಾಲಯ ಕುಣಿತ, ಹುಲಿ ವೇಷ, ವೀರ ಮಕ್ಕಳ ಕುಣಿತ, ಸೋಮನ ಕುಣಿತ, ಚಂಡೆ, ಕರ್ ಕುಣಿತ, ಬಂಜಾರ ತಂಡ, ಸೋಲಿಗರ ಕುಣಿತ ತಮಟೆ ಸೇರಿದಂತೆ 50ಕ್ಕೂ ಕಲಾಪ್ರಕಾರಗಳು ಒಮ್ಮೆಲೆಗೆ ನೃತ್ಯವನ್ನು ಪ್ರಸ್ತುತ ಪಡಿಸಿದರು. ಹಲವು ವೈವಿದ್ಯಮಯ ಹಾಗೂ ನಮ್ಮ ಸಂಸ್ಕೃತಿಯ ಸೊಬಗನ್ನು ಪ್ರಸ್ತುತ ಪಡಿಸಿದ ಕಲೆ ನೆರೆದಿದ್ದವರ ಮನಸೊರೆಗೊಂಡಿತ್ತು.

ಭುವನೇಶ್ವರಿ ಇರುವ ಪಲ್ಲಕ್ಕಿ, ಜ್ಞಾನಪೀಠ ಪುರಸ್ಕೃತರಾದ ಕುವೆಂಪು, ದ.ರಾ.ಬೇಂದ್ರೆ, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ವಿ.ಕೃ.ಗೋಕಾಕ್, ಯು.ಆರ್.ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ್ ಕಂಬಾರ ಅವರ ಪಲ್ಲಕ್ಕಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಸುಮಾರು 500 ಮಂದಿ ಇರುವ ಕಲಾ ತಂಡಗಳು ವಿಧಾನಸೌಧದಿಂದ ಕಬ್ಬನ್ ಪಾರ್ಕ್ ರಸ್ತೆ, ಕಸ್ತೂರ ಬಾ ರಸ್ತೆ, ಅನಿಲ್ ಕುಂಬ್ಳೆ ವೃತ್ತ, ಮಹಾತ್ಮ ಗಾಂಧಿ ಮೆಟ್ರೋ ನಿಲ್ದಾಣದ ಮೂಲಕ ಮೆರವಣಿಗೆಯಲ್ಲಿ ಸಾಗಿದವು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News