ನಟ ಶಿವರಾಜ್ ಕುಮಾರ್ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Update: 2025-01-27 13:39 IST
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಾಗವಾರದಲ್ಲಿನ ಖ್ಯಾತ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆ ಮುಗಿದು ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿದಾಗ, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ತೊಂದರೆ ಇಲ್ಲ ಎಂದು ತಿಳಿಸಿದ್ದರು.
ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.