×
Ad

ರಾಜಕಾಲುವೆಗಳ ಒತ್ತವರಿಯಾಗಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ ಸೂಚನೆ

Update: 2025-05-21 15:22 IST

ಬೆಂಗಳೂರು: ರಾಜಕಾಲುವೆಗಳು ಒತ್ತುವರಿಯಾಗಿದ್ದಾರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಸರಿ. ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

 

ಬೆಂಗಳೂರಿನಲ್ಲಿಂದು ಸಿಟಿ ರೌಂಡ್ಸ್ ಮಾಡಿದ ಮುಖ್ಯಮಂತ್ರಿ, ಯಲಹಂಕದಲ್ಲಿ ರಾಜಕಾಲುವೆ ಒತ್ತುವರಿ ಸ್ಥಳಗಳನ್ನು ಪರಿಶೀಲಿಸಿದರು. ಈ ವೇಳೆ ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು.

 

'ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು ಸುಮ್ಮನಿದ್ದೀರಾ' ಎಂದು ಖಾರವಾಗಿ ಪ್ರಶ್ನಿಸಿದ ಸಿಎಂ, "ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ' ಎಂದು ಸ್ಪಷ್ಟ ಸೂಚನೆ ನೀಡಿದರು.

 

ಬಳಿಕ ಎಚ್.ಆರ್.ಬಿ. ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶವನ್ನು ವೀಕ್ಷಣೆ ಮಾಡಿದ ಮುಖ್ಯಮಂತ್ರಿ, ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು.

 

ಬಾದಿತ ಪ್ರದೇಶಗಳಲ್ಲಿ ಬೇಸ್ ಮೆಂಟ್ ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ ಟೌನ್ ಪ್ಲಾನಿಂಗ್ ನಲ್ಲಿ ಬದಲಾವಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿಯಲ್ಲಿ ರಾಜಕಾಲುವೆ ಪರಿಶೀಲನೆ

 

ರಾಜಕಾಲುವೆ ವಿಸ್ತೀರ್ಣ 29 ಮೀಟರ್. ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀರು ಈ ಬಾಟಲ್ ನೆಕ್ ನಲ್ಲಿ ಓವರ್ ಫ್ಲೋ ಆಗಿ ಸಾಯಿ ಲೇಔಟ್ ಗೆ ನುಗ್ಗುವ ಸಮಸ್ಯೆಯನ್ನು ಮುಖ್ಯಮಂತ್ರಿ ಪರಿಶೀಲನೆ ವೇಳೆ ಕಂಡುಕೊಂಡರು.

 

ಎಂಟು ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ ಅನ್ನು ವಿಸ್ತರಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು.

ಮಂಗಳವಾರ ರೈಲ್ವೆ ಇಲಾಖೆಯವರು ಈ ವೆಂಟ್ ವಿಸ್ತರಣೆಗೆ ಬಿಡಿಎಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸಿಎಂ ಸೂಚಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News