×
Ad

ಕ್ರೈಸ್ತ ಸಂಪ್ರದಾಯದಂತೆ ನೆರವೇರಿದ ಉದ್ಯಮಿ ಸಿ.ಜೆ.ರಾಯ್ ಅಂತ್ಯಸಂಸ್ಕಾರ

Update: 2026-02-01 22:30 IST

ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್‍ನ ಮುಖ್ಯಸ್ಥ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಅಂತ್ಯಸಂಸ್ಕಾರವು ನಗರದ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‍ನಲ್ಲಿ ಕ್ರೈಸ್ತ ಸಂಪ್ರದಾಯದಂತೆ ರವಿವಾರ ಸಂಜೆ ನೆರವೇರಿತು.

ಸಿ.ಜೆ.ರಾಯ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಿಂದ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ ಬಳಿಕ, ಆಸ್ಪತ್ರೆಯಿಂದ ಹೊರಟ ಆಂಬ್ಯುಲೆನ್ಸ್ ಅನ್ನು ರಾಯ್ ಅವರ ಕಾನ್ಫಿಡೆಂಟ್ ಕಚೇರಿ ಮುಂದೆ ಕೆಲಕಾಲ ನಿಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಶಾಸಕ ಎನ್.ಎ.ಹ್ಯಾರಿಸ್ ಅವರು ರಾಯ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ನಂತರ ಮೆರವಣಿಗೆಯಲ್ಲಿ ಪಾರ್ಥಿವ ಶರೀರವನ್ನು ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‍ಗೆ ಕೊಂಡೊಯ್ಯಲಾಯಿತು.

ಕಾಸಾಗ್ರ್ಯಾಂಡ್‍ನಲ್ಲಿ ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ರಾಯ್ ಅವರ ಸಂಬಂಧಿಕರು, ಆಪ್ತರು ಅಂತಿಮ ದರ್ಶನ ಪಡೆದರು. ಇದಾದ ನಂತರ ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‍ನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News