×
Ad

ಆರೋಪ ಮಾಡುವುದೇ ವಿರೋಧ ಪಕ್ಷಗಳ ಕೆಲಸ : ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

Update: 2026-07-05 17:54 IST

ಬೆಂಗಳೂರು: "ವಿರೋಧ ಪಕ್ಷದವರಿಗೆ ಆರೋಪ ಮಾಡುವುದೇ ಕೆಲಸ" ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ರವಿವಾರ ಪ್ರತಿಕ್ರಿಯೆ ನೀಡಿದರು.

ಎಸ್ಐಆರ್ ಪ್ರಕ್ರಿಯೆಯನ್ನು ಮನೆ ಮನೆಗೆ ಹೋಗಿ ಮಾಡದೇ ಒಂದೇ ಕಡೆ ಮಾಡಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, "ಸರಕಾರದ ವತಿಯಿಂದ ನಾವು ಎಲ್ಲರಿಗೂ ನ್ಯಾಯ ಒದಗಿಸಿಕೊಡಬೇಕು ಹಾಗೂ ಎಲ್ಲರೂ ತಮ್ಮ ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದು ಮನವಿ ಮಾಡಿದ್ದೇವೆ. ನಮ್ಮದೂ ಪ್ರತಿಭಟನೆ ಇದೆ. ಅದನ್ನು ನ್ಯಾಯಬದ್ಧವಾಗಿ ಪ್ರತಿಭಟಿಸಬೇಕೋ ಪ್ರತಿಭಟಿಸುತ್ತೇವೆ" ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News