ಹೊಸದಿಲ್ಲಿ : ನಮ್ಮ ರಾಜ್ಯದ ಹಳೆಯ ಬಾಕಿ ವಿಚಾರವಾಗಿ ನಾನು ವಿತ್ತ ಸಚಿವರೊಂದಿಗೆ ಚರ್ಚೆ ಮಾಡಿದ್ದು, ಕೆಲವು ಸಿಹಿ ಸುದ್ದಿ ಕೊಟ್ಟಿದ್ದಾರೆ. ನಾನು ಈಗ ಆ ಬಗ್ಗೆ ಹೇಳುವುದಿಲ್ಲ. ನಂತರ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಗುರುವಾರ ಹೊಸದಿಲ್ಲಿಯಲ್ಲಿ ನಡೆದ ಜಿಎಸ್‍ಟಿ ಕೌನ್ಸಿಲ್ ಸಭೆಯ ಬಳಿಕ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್‍ಟಿ ಕೌನ್ಸಿಲ್ ಸಭೆ ಅತ್ಯುತ್ತಮವಾಗಿ ನಡೆಯಿತು. ಕರ್ನಾಟಕದ ಅಂಶಗಳನ್ನು ಎಲ್ಲರೂ ಒಪ್ಪಿದ್ದಾರೆ ಎಂದು ಹೇಳಿದರು.

ಜಿಎಸ್‍ಟಿ ಪಾವತಿಸದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸುವ ವಿಚಾರ ಪ್ರಸ್ತಾಪವಾಯಿತು. ಆದಾಯ ತೆರಿಗೆ ನಿಯಮ, ನಿಬಂಧನೆಗಳಂತೆ ಮಾಡಬೇಕು, ಅನಗತ್ಯವಾಗಿ ಅಧಿಕಾರಿಗಳು ವ್ಯಾಪಾರಸ್ಥರನ್ನು ಬಂಧಿಸುವುದು ಸರಿಯಲ್ಲ. ಅವರಿಂದ ಎಷ್ಟು ಕಟ್ಟಿಸಿಕೊಳ್ಳಬೇಕೋ ಅಷ್ಟು ಹಣ ಕಟ್ಟಿಸಿಕೊಳ್ಳೋಣ. ಬಂಧಿಸುವುದು ಸರಿಯಲ್ಲ ಎಂದು ಚರ್ಚೆಯಾಯಿತು. ಒಂದು ರಾಜ್ಯ ಬಿಟ್ಟರೆ ಉಳಿದ ರಾಜ್ಯಗಳು ಇದಕ್ಕೆ ಒಪ್ಪಿವೆ ಎಂದು ಶಿವಕುಮಾರ್ ಹೇಳಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor