ನಾಳೆ ದಿಲ್ಲಿಗೆ ಸಿಎಂ ಡಿ.ಕೆ.ಶಿವಕುಮಾರ್ ಪ್ರಯಾಣ
ಬೆಂಗಳೂರು : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್ ಎ ಜರ್ನಿ ಆಫ್ ಲವ್’ ಪುಸ್ತಕದ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ಮಧ್ಯಾಹ್ನ 1.15ಕ್ಕೆ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಸಂಜೆ 4.05ಕ್ಕೆ ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುವ ಮುಖ್ಯಮಂತ್ರಿ, ರಾಜ್ಯದ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ. ಸಂಜೆ 6.30ಕ್ಕೆ ಹೊಸದಿಲ್ಲಿಯ ಐಟಿಸಿ ಮೌರ್ಯ ಹೊಟೇಲ್‍ನಲ್ಲಿ ಆಯೋಜಿಸಲಾಗಿರುವ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಆನಂತರ, ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ, ಮಂಡಳಿಗಳ ನೇಮಕಾತಿಗೆ ಸಂಬಂಧಿಸಿದ ವಿಚಾರಗಳ ಕುರಿತು ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮುಖ್ಯಮಂತ್ರಿ ಚರ್ಚೆ ನಡೆಸುವ ಸಾಧ್ಯತೆಗಳಿವೆ. ರಾತ್ರಿ 9.55ಕ್ಕೆ ಇಂದಿರಾಗಾಂಧಿ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.