×
Ad

ದರ್ಶನ್ ಮತ್ತು ಸಹಚರರನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಲು ಸಿಎಂ ತಾಕೀತು

Update: 2024-08-26 13:06 IST
ಜೈಲಿನಲ್ಲಿ ಸಹಚರರೊಂದಿಗೆ ಹರಟೆ ಹೊಡೆಯುತ್ತಿರುವ ದರ್ಶನ್

ಬೆಂಗಳೂರು, ಆ.26: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.

ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ತಾಕೀತು ಮಾಡಿದ್ದಾರೆ.

ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News