×
Ad

ಮಳೆ ಅನಾಹುತ, ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ: ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿಎಂ ಸೂಚನೆ

Update: 2025-05-28 11:51 IST

ಬೆಂಗಳೂರು ಮೇ 28: ರಾಜ್ಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು.

ಭಾರೀ ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ.

ಈ ಬಗ್ಗೆ ಸಮಗ್ರ ಅವಲೋಕನ ನಡೆಸಲು ಮೇ 30, 31ರಂದು ಜಿಲ್ಲಾಧಿಕಾರಿ, ಜಿಪಂ ಸಿಇಒ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ತೆಗೆದುಕೊಂಡಿರುವ ಕ್ರಮಗಳು...

 ರಾಜ್ಯದಲ್ಲಿ 170 ತಾಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.

 ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗನ್ನು ಗುರುತಿಸಲಾಗಿದೆ.

 ಮೇ-26ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99ರಷ್ಟು ಆರ್ಥಿಕ ಸಹಾಯಧನವನ್ನು ಪಾವತಿ ಮಾಡಲಾಗಿದೆ.

 ಮೇ-26ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ. ಖಾತೆಯಲ್ಲಿ 97,351.95 ಲಕ್ಷ ರೂ. ಅನುದಾನವಿರುತ್ತದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News