×
Ad

ತಾನು ಹೇಳಿದ ಸುಳ್ಳನ್ನು ಅಳಿಸಿಹಾಕುವುದೆಂದರೆ ವಾಂತಿ ಮಾಡಿ, ಅದನ್ನು ತಿಂದ ಹಾಗೆ : ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Update: 2024-05-08 17:51 IST

ಬೆಂಗಳೂರು : "ತಾನು ಹೇಳಿದ ಸುಳ್ಳನ್ನು ಅಳಿಸಿಹಾಕುವುದೆಂದರೆ ವಾಂತಿ ಮಾಡಿ, ಅದನ್ನು ಮಾಡಿದವರೇ ತಿಂದ ಹಾಗೆ. ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ರಾಜ್ಯ ಬಿಜೆಪಿಯು, ನಾವು ಸತ್ಯವನ್ನು ಬಿಚ್ಚಿಟ್ಟ ಕೂಡಲೇ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಸುಳ್ಳು ಆರೋಪದ ಹೇಳಿಕೆಯನ್ನು ಅಳಿಸಿಹಾಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸಾಮಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, "ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿ ಹಿಂದೂಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿದೆ ಎಂಬ ಸುಳ್ಳು ಆರೋಪವನ್ನು ರಾಜ್ಯ ಬಿಜೆಪಿ ಮಾಡಿತ್ತು" ಎಂದು ಹೇಳಿದ್ದಾರೆ.

"ಈ ಬ್ರಹ್ಮರಥೋತ್ಸವ ಸಮಿತಿಗೆ ಬಿಜೆಪಿ ಸರ್ಕಾರದ ಕಾಲದಲ್ಲಿಯೂ ಮುಸ್ಲಿಂ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಲಾಗಿತ್ತು ಎಂಬ ಸತ್ಯ ಸಂಗತಿಯನ್ನು ನಾನು ದಾಖಲೆ ಸಮೇತ ಮುಂದಿಟ್ಟದ್ದು ಮಾತ್ರವಲ್ಲ, ಸಾಮಾಜಿಕ ಮಾಧ್ಯಮಗಳಲ್ಲಿನ ತನ್ನ ಹೇಳಿಕೆಯನ್ನು ಬಿಜೆಪಿ ಅಳಿಸಿಹಾಕಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದೆ " ಎಂದು ತಿಳಿಸಿದರು.

ʼಬಣ್ಣ ಬಯಲಾದ ಕೂಡಲೇ ಎಚ್ಚೆತ್ತುಗೊಂಡ ಲಜ್ಜೆಗೆಟ್ಟ ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಹೇಳಿಕೆಯನ್ನು ಅಳಿಸಿಹಾಕಿದೆ. ಈ ಬಗ್ಗೆ ಇನ್ನೂ ರಾಜ್ಯದ ಜನರ ಕ್ಷಮೆ ಕೇಳಿಲ್ಲʼ ಎಂದು ಪೋಸ್ಟ್‌ ನಲ್ಲಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News