×
Ad

ಹಿರಿಯ ಕಾರ್ಮಿಕ ಮುಖಂಡ ಅನಂತ್ ಸುಬ್ಬರಾವ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

Update: 2026-01-28 23:27 IST

ಬೆಂಗಳೂರು: ಹಿರಿಯ ಕಾರ್ಮಿಕ ಮುಖಂಡ, ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಅನಂತ್ ಸುಬ್ಬರಾವ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.  

ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ,  ‘ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಹಾಗೂ ಜನಪ್ರಿಯ ಕಾರ್ಮಿಕ ಮುಖಂಡ ಎಚ್.ವಿ. ಅನಂತ ಸುಬ್ಬರಾವ್ ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಸುದೀರ್ಘ ನಾಲ್ಕು ದಶಕಗಳ ಕಾಲ ಕಾರ್ಮಿಕ ಮುಖಂಡರಾಗಿ ಅನೇಕ ಚಳವಳಿಗಳನ್ನು ಮುನ್ನಡೆಸಿದ್ದ ಹೋರಾಟಗಾರ ಅನಂತ ಸುಬ್ಬರಾವ್ ನನಗೂ ಆತ್ಮೀಯರಾಗಿದ್ದರು. ಅವರ ದಣಿವರಿಯದ ಹೋರಾಟದ ಛಲ ಮತ್ತು ಸೈದ್ಧಾಂತಿಕ ಬದ್ಧತೆ ಹೋರಾಟಗಾರರಿಗೆ ಒಂದು ಮಾದರಿ. ಅವರ ನಿರ್ಗಮನದಿಂದ ಸಮಾಜಕ್ಕೆ, ಮುಖ್ಯವಾಗಿ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News