×
Ad

ಬ್ರೇಕ್‌ಫಾಸ್ಟ್ ಸಭೆಯಲ್ಲಿ ರಾಜೀನಾಮೆಯ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

► ಮಧ್ಯಾಹ್ನ 3ಕ್ಕೆ ಲೋಕಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ

Update: 2026-05-28 11:13 IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ನಡೆದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಸಚಿವರಿಗೆ ರಾಜೀನಾಮೆ ನೀಡುವ ನಿರ್ಧಾರದ ಕುರಿತು ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ನಿವಾಸ ‘ಕಾವೇರಿ’ಯಲ್ಲಿ ನಡೆದ ಸಭೆಯ ವೇಳೆ ಈ ವಿಷಯ ಪ್ರಸ್ತಾಪವಾಗಿದೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರು ಮಧ್ಯಾಹ್ನ 3 ಗಂಟೆಯೊಳಗೆ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ ಈ ಕುರಿತು ಮುಖ್ಯಮಂತ್ರಿ ಅವರು ಈ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಕೆ.ಜೆ. ಜಾರ್ಜ್, ರಾಮಲಿಂಗ ರೆಡ್ಡಿ, ಡಾ. ಎಚ್‌.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಬಸವರಾಜ ರಾಯರೆಡ್ಡಿ, ಡಾ. ಶರಣ ಪ್ರಕಾಶ್ ಪಾಟೀಲ್, ಸಂತೋಷ ಲಾಡ್, ಮಧು ಬಂಗಾರಪ್ಪ ಹಾಗೂ ಶಿವರಾಜ್ ತಂಗಡಗಿ ಕೂಡ ಸಭೆಯಲ್ಲಿ ಭಾಗವಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News