×
Ad

ಕೆಇಎ ಮೊದಲ ಸುತ್ತಿನ ನಂತರವೇ ಕಾಮೆಡ್-ಕೆ ಸೀಟು ಹಂಚಿಕೆ

Update: 2025-05-12 20:57 IST

ಎಂ.ಸಿ. ಸುಧಾಕರ್

ಬೆಂಗಳೂರು : ಕೆಇಎ ಮೊದಲ ಸುತ್ತಿನ ಸೀಟು ಹಂಚಿಕೆ ನಂತರವೇ ಕಾಮೆಡ್-ಕೆ ಸೀಟು ಹಂಚಿಕೆ ಪ್ರಕ್ರಿಯೆ ಆರಂಭಿಸಬೇಕು ಎನ್ನುವ ಸಲಹೆಗೆ ಕಾಮೆಡ್-ಕೆ ಒಪ್ಪಿಗೆ ಸೂಚಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ವರ್ಷದ ಸೀಟ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸದ್ಯದಲ್ಲೇ ಪೊಲೀಸ್ ಕಮಿಷನರ್ ಅವರನ್ನು ಕರೆಸಿ, ಹೆಚ್ಚುವರಿ ಮಾಹಿತಿ ಪಡೆಯಲಾಗುವುದು ಎಂದು ಹೇಳಿದರು.

ಇನ್ನು ಸರಕಾರಿ ಮತ್ತು ಅನುದಾನಿತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಭರ್ತಿಯಾಗದೆ ಉಳಿಯುವ ಅನೇಕ ವಿಭಾಗಗಳ ಎಂಜಿನಿಯರಿಂಗ್ ಸೀಟುಗಳ ಶುಲ್ಕವನ್ನು ಕಡಿಮೆ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ. ಈ ಸಂಬಂಧ ಯಾವ ಕಾಲೇಜುಗಳಲ್ಲಿ, ಯಾವ ಕೋರ್ಸ್‍ಗೆ ಪ್ರವೇಶ ಕಡಿಮೆಯಾಗಿದೆ ಎಂಬುದನ್ನು ನೋಡಿಕೊಂಡು, ನಂತರ ತಿಳಿಸಲಾಗುತ್ತದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News