ಭೈರತಿ ಸುರೇಶ್ ವಿರುದ್ಧ ಕಾಮೆಂಟ್ ಪ್ರಕರಣ: ಆರೋಪಿಯ ಬಂಧನ
Update: 2026-08-06 15:53 IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಸಚಿವ ಭೈರತಿ ಸುರೇಶ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಆರೋಪದಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ದಿನ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ಮುಂದುವರಿದ ತನಿಖೆಯ ಭಾಗವಾಗಿ ಇಂದು ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿ ಡಿಸಿಪಿ ಅವರ ಮುಂದೆ ಹಾಜರುಪಡಿಸಿದರು.
ನ್ಯಾಯಾಲಯದಿಂದ ತಕ್ಷಣ ಜಾಮೀನು ದೊರೆಯದ ಹಿನ್ನೆಲೆಯಲ್ಲಿ ಆರೋಪಿಗೆ ರಾತ್ರಿ ಪೊಲೀಸ್ ಠಾಣೆಯಲ್ಲೇ ಕಾಲ ಕಳೆಯಬೇಕಾದ ಪರಿಸ್ಥಿತಿ ಎದುರಾಯಿತು.
ಒಂದೇ ಪ್ರಕರಣದಲ್ಲಿಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ, ಒಬ್ಬರ ವಿರುದ್ಧ ಬಂಧನ ಕ್ರಮ ಕೈಗೊಂಡಿರುವುದು ಮತ್ತು ಮತ್ತೊಬ್ಬರಿಗೆ ಬಿಡುಗಡೆಯಾಗಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಈ ಪ್ರಕರಣದ ಕುರಿತು ಸಾರ್ವಜನಿಕ ವಲಯದಲ್ಲಿಯೂ ಚರ್ಚೆ ನಡೆಯುತ್ತಿದೆ.
ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.