×
Ad

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಬಿಜೆಪಿ ಮುಖ್ಯ ವಕ್ತಾರ‌ ಮಹೇಶ್ ವಿರುದ್ಧ ದೂರು ದಾಖಲು

Update: 2025-10-23 12:46 IST

PC: karnataka.bjp.org

ಬೆಂಗಳೂರು, ಅ.23: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಕುರಿತು ಕೇಳಿರುವ ಪ್ರಶ್ನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಬಿಜೆಪಿ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ವಿರುದ್ಧ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಹೇಶ್ ಉದ್ದೇಶ ಪೂರಕವಾಗಿ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಗುಲಾಮ ಎಂದು ಸಂಬೋಧಿಸಿದ್ದು, ಜಾತಿಯನ್ನು ಅವಮಾನಿಸಿದ್ದಾರೆ. ದ್ವೇಷ ಹರಡುವ ಮತ್ತು ಮಾನಹಾನಿ ಮಾಡುವ ಉದ್ದೇಶದಿಂದ ಸುಳ್ಳು ಮಾಹಿತಿಯನ್ನು ಹರಡಿದ್ದಾರೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡು ಬಂಧಿಸುವಂತೆ ಕೋರಿ ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಎನ್.ಆನಂದ್ ದೂರು ಸಲ್ಲಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಯೊಬ್ಬರು, ಮಹೇಶ್ ಅವರು ಮೈಸೂರಿನಲ್ಲಿ ಹೇಳಿಕೆ ನೀಡಿದ್ದು, ಹೀಗಾಗಿ, ತನಿಖೆಗಾಗಿ ಮೈಸೂರು ಪೊಲೀಸರಿಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News