×
Ad

ಬೆಂಗಳೂರಿನಲ್ಲಿ ಮುಂದುವರೆದ ಮಳೆ

Update: 2024-06-07 20:01 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ನಗರದಲ್ಲಿ ಮಳೆ ಮುಂದುವರೆದಿದ್ದು, ಶುಕ್ರವಾರ ಸಂಜೆ ಸುರಿದ ಸಾಧಾರಣ ಮಳೆಯಿಂದ ನಗರದಲ್ಲಿ ವಾಹನ ಸವಾರರು ಪರದಾಡುವಂತಾಯಿತು. ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಮಳೆಯಾಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ನಗರದ ಮೆಜೆಸ್ಟಿಕ್, ಕಾರ್ಪೋರೇಷನ್, ಕೆ.ಆರ್.ಮಾರುಕಟ್ಟೆ, ಕೋರಮಂಗಲ, ಎಚ್‍ಎಸ್‍ಆರ್ ಲೇಔಟ್, ಮೆಜೆಸ್ಟಿಕ್, ಶೇಶಾದ್ರಪುರಂ, ವಿದ್ಯಾರಣ್ಯಪುರಂ, ಸಿಲ್ಕ್‍ಬೋರ್ಡ್, ವೈಟ್‍ಫೀಲ್ಡ್, ಕೆ.ಆರ್. ಪುರಂ, ಯಶವಂತಪುರ ಸೇರಿದಂತೆ ಹಲವೆಡೆ ಮಳೆ ಬಿದ್ದಿದೆ. ಇನ್ನು ಜೂನ್ ಆರಂಭದಿಂದಲೇ ಮುಂಗಾರು ಆರಂಭವಾಗಿದ್ದು, ನಗರದಲ್ಲಿ ಬೆಳಗ್ಗೆಯೆಲ್ಲ ಬಿಡುವು ನೀಡಿ, ಸಂಜೆ ಅಥವಾ ರಾತ್ರಿಯಾಗುತ್ತಿದ್ದಂತೆ ಮಳೆ ಬೀಳುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News