×
Ad

ಮಹೇಶ್ ಜೋಶಿಗೆ ನೋಟಿಸ್ ಜಾರಿ ಮಾಡಿದ ಸಹಕಾರ ಇಲಾಖೆ

Update: 2025-05-13 18:00 IST

ಮಹೇಶ್ ಜೋಶಿ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ವಿರುದ್ದ ಸಲ್ಲಿಕೆಯಾಗಿರುವ ದೂರಿಗೆ 15 ದಿನಗಳ ಒಳಗೆ ವಿವರಣೆಯನ್ನು ಸಲ್ಲಿಸಬೇಕು. ಇಲ್ಲವಾದಲ್ಲಿ, ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಹಕಾರ ಇಲಾಖೆಯು ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿಗೆ ನೋಟಿಸ್ ಜಾರಿ ಮಾಡಿದೆ.

ಪರಿಷತ್ತಿನ ವಿರುದ್ದ ಸಾಮಾಜಿಕ ಕಾರ್ಯಕರ್ತ ಎನ್. ಹನುಮೇಗೌಡ ಸಹಕಾರ ಇಲಾಖೆ ದೂರು ನೀಡಿದ್ದರು. ಇದರ ಅನ್ವಯ ಇಲಾಖೆಯು ಪರಿಷತ್ತಿಗೆ ಪತ್ರವನ್ನು ಬರೆದು ದೂರಿಗೆ ಉತ್ತರವನ್ನು ನೀಡುವಂತೆ ಸೂಚಿಸಿತ್ತು. ಆದರೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಇಲಾಖೆಗೆ ಪ್ರತಿ ಹೇಳಿಕೆಯನ್ನು ನೀಡಿಲ್ಲ ಎಂದು ನೋಟಿಸ್‍ನಲ್ಲಿ ತಿಳಿಸಿದೆ.

ಇದರ ನಡುವೆ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪ್ರಕಾಶ್ ಮೂರ್ತಿ ಸೇರಿದಂತೆ ಮತ್ತಿತರರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ವಿರುದ್ಧ ದೂರುಗಳನ್ನು ನೀಡಿದ್ದಾರೆ. ಈ ಹಿನ್ನೆಯಲ್ಲಿ 15 ದಿನಗಳ ಒಳಗೆ ವಿವರಣೆಯನ್ನು ಸಲ್ಲಿಸಬೇಕು. ಇಲ್ಲವಾದಲ್ಲಿ, ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಹಕಾರ ಇಲಾಖೆಯು ನೋಟಿಸ್ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News