×
Ad

ಕರ್ನಾಟಕ ಬಜೆಟ್ ಗೆ ಕ್ಷಣಗಣನೆ | ದಾಖಲೆ 17ನೇ ಬಾರಿ ಆಯ-ವ್ಯಯ ಮಂಡಿಸಲಿರುವ ಸಿದ್ದರಾಮಯ್ಯ

Update: 2026-03-06 09:55 IST

ಬೆಂಗಳೂರು: ರಾಜ್ಯ ಮುಖ್ಯಮಂತ್ರಿ, ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ.

ಕರ್ನಾಟಕದ ಮಟ್ಟಿಗೆ 16 ಬಾರಿ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿರುವ ಸಿದ್ದರಾಮಯ್ಯ ಇಂದು ತಮ್ಮದೇ ದಾಖಲೆಯನ್ನು ಮುರಿಯಲಿದ್ದಾರೆ.

ಬೆಳಗ್ಗೆ 10:15ಕ್ಕೆ ಬಜೆಟ್ ಅಧಿವೇಶನ ಶುರುವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನವು ಮಾ.27ರವರೆಗೆ ನಡೆಯಲಿದೆ.

2013ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಹಣಕಾಸು ಖಾತೆಯನ್ನೂ ಹೊಂದಿದ್ದರು. ಆ ಅವಧಿಯ ಎಲ್ಲ ಬಜೆಟ್ಗಳನ್ನೂ ಅವರೇ ಮಂಡಿಸಿದ್ದರು. ಎರಡನೇ ಅವಧಿಗೆ ಮುಖ್ಯಮಂತ್ರಿಯಾದ ಬಳಿಕ ಈ ವರೆಗೆ ಮೂರು ಬಾರಿ ಬಜೆಟ್ ಮಂಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News