ಡೆವಿಲ್ ಸಿನಿಮಾ ಚಿತ್ರೀಕರಣಕ್ಕೆ ವಿದೇಶಕ್ಕೆ ತೆರಳಲು ನಟ ದರ್ಶನ್‌ಗೆ ಕೋರ್ಟ್ ಅನುಮತಿ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದು ರಿಲೀಸ್ ಆಗಿರುವ ನಟ ದರ್ಶನ್‌ಗೆ ಕೊನೆಗೂ ಕೋರ್ಟ್ ಗುಡ್‌ನ್ಯೂಸ್ ಕೊಟ್ಟಿದೆ. ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಡೆವಿಲ್ ನ ಶೂಟಿಂಗ್‌ಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿ ಕೋರ್ಟ್ ಆದೇಶಿದೆ.
ಶೂಟಿಂಗ್‌ಗಾಗಿ ವಿದೇಶಕ್ಕೆ ಹೋಗಲು ಅನುಮತಿ ಕೋರಿ ಆರೋಪ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ 64ನೇ CCH ಕೋರ್ಟ್‌ನ ನ್ಯಾ. ಐ.ಪಿ ನಾಯ್ಕ್ ಅವರು ಅನುಮತಿ ನೀಡಿ ಆದೇಶಿಸಿದ್ದಾರೆ.
ಡೆವಿಲ್ ಸಿನಿಮಾ ಚಿತ್ರೀಕರಣದ ಹಿನ್ನೆಲೆಯಲ್ಲಿ ದುಬೈ ಮತ್ತು ಯೂರೋಪ್ಗೆ ತೆರಳಲು ಅವಕಾಶ ಕೋರಿ CRPC ಸೆಕ್ಷನ್ 439(1) (b) ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಒಟ್ಟು 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಲಾಗಿದೆ. ಜೂನ್ 1ರಿಂದ 25ರವರೆಗೆ ವಿದೇಶಕ್ಕೆ ತೆರಳಲು ಅವಕಾಶ ನೀಡುವಂತೆ ದರ್ಶನ್ ಮನವಿ ಮಾಡಿದ್ದರು. ಆದರೆ ಸರ್ಕಾರ ಪರ ವಕೀಲರು ಅನುಮತಿ ನೀಡದಂತೆ ಆಕ್ಷೇಪ ವ್ಯಕ್ತಪಡಿಸಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಅನುಮತಿ ನೀಡಿ ಆದೇಶಿಸಿದೆ.