ಸಿ.ಟಿ.ರವಿ ಬಂಧನ ಪ್ರಕರಣ | ಪೊಲೀಸ್ ಕ್ರಮದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ ಡಿಕೆಶಿ
ಡಿ.ಕೆ.ಶಿವಕುಮಾರ್
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮಾನಹಾನಿಕರ ಬಳಸಿ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿ ನಡೆದಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ವಿಚಾರದಲ್ಲಿ ಪೊಲೀಸ್ ಕ್ರಮದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪ್ರಕರಣದಲ್ಲಿ ಕಾಂಗ್ರೆಸ್ ಸರಕಾರ ಹಸ್ತಕ್ಷೇಪ ಮಾಡುತ್ತಿದೆ ಎಂಬ ಬಿಜೆಪಿ ಆರೋಪದ ಕುರಿತಂತೆ ಪ್ರತಿಕ್ರಿಯಿಸಿದ ಡಿಕೆಶಿ, ಪೊಲೀಸ್ ಕ್ರಮದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಿ.ಟಿ.ರವಿ ಜೊತೆ ಪೊಲೀಸರು ಅತ್ಯಂತ ಸೌಜನ್ಯವಾಗಿ ವರ್ತಿಸಿದ್ದಾರೆ. ಆದರೆ ಬಿಜೆಪಿಯವರು ಖಾನಾಪುರ ಪೊಲೀಸ್ ಠಾಣೆಗೆ ಹೋಗಿ ಸಭೆ ನಡೆಸಿದ್ದಾರೆ. ಪೊಲೀಸರ ಕ್ರಮವೂ ಸರಿಯಾಗಿಲ್ಲ. ಸಿ.ಟಿ. ರವಿಯನ್ನು ಭೇಟಿಯಾಗಲು ಬಿಜೆಪಿ ನಾಯಕರಿಗೆ ಹೇಗೆ ಅವಕಾಶ ಮಾಡಿಕೊಟ್ಟರು ಎಂದು ಪ್ರಶ್ನಿಸಿದ ಡಿಕೆಶಿ, ಸರಕಾರ ಯಾವುದರಲ್ಲೂ ಹಸ್ತಕ್ಷೇಪ ಮಾಡಿಲ್ಲ ಎಂದು ಪುನರುಚ್ಚರಿಸಿದರು.
ಸಿ.ಟಿ.ರವಿ ಈ ಹಿಂದೆಯೂ ಹಲವು ನಾಯಕರ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ ಎಂದು ಡಿಸಿಎಂ ಆರೋಪಿಸಿದರು.