×
Ad

ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-11-27 22:14 IST

ಬೆಂಗಳೂರು : "ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದರು.

ಮುಸಲ್ಮಾನರ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ಸ್ವಾಮೀಜಿಗಳ ಹೇಳಿಕೆ ಬಗ್ಗೆ ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, " ಸ್ವಾಮೀಜಿಗಳು ಇಂತಹ ವಿವಾದಾತ್ಮಕ ಹೇಳಿಕೆ ನೀಡಬಾರದು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು ರಾಜಕಾರಣದಿಂದ ದೂರ ಇರೋದು ಒಳ್ಳೆಯದು. ಮತದಾನ ಎಂಬುದು ಸಂವಿಧಾನದ ಮೂಲಕ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಬಂದಿರುವ ಹಕ್ಕು. ಇಲ್ಲಿ ಒಬ್ಬ ವ್ಯಕ್ತಿ ಜನಿಸಿದರೆ ಸಂವಿಧಾನದಿಂದ ಸಿಗುವ ಹಕ್ಕುಗಳಲ್ಲಿ ಇದು ಕೂಡ ಒಂದು" ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News