×
Ad

ಡಾ.ಬಾಬು ಜಗಜೀವನ್ ರಾಮ್ ಪುಣ್ಯತಿಥಿ: ಸಿಎಂ ಸಿದ್ದರಾಮಯ್ಯರಿಂದ ಪುಷ್ಪ ನಮನ

Update: 2024-07-06 11:43 IST

ಬೆಂಗಳೂರು, ಜು.6: ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ದಿವಂಗತ ಡಾ.ಬಾಬು ಜಗಜೀವನ್ ರಾಮ್ ಅವರ ಪುಣ್ಯತಿಥಿಯ ಅಂಗವಾಗಿ ಇಂದು ಬೆಳಗ್ಗೆ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅವರ ಪ್ರತಿಮೆಯ ಸ್ಥಳದಲ್ಲಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News