×
Ad

ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಪ್ರಕರಣ; ಪಿಐಎಲ್ ದಾಖಲಿಸಿಕೊಳ್ಳಲು ಕೋರಿ ಸಿಜೆಐಗೆ ಪತ್ರ ಬರೆದ ಬೆಂಗಳೂರು ವಕೀಲರ ಸಂಘ

Update: 2023-07-24 23:36 IST

ಬೆಂಗಳೂರು, ಜು.24: ಕರ್ನಾಟಕ ಹೈಕೋರ್ಟ್‍ನ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು, ಈ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡು ವಿಚಾರಣೆ ನಡೆಸಬೇಕು ಎಂದು ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳಿಗೆ ಬೆಂಗಳೂರು ವಕೀಲರ ಸಂಘ ಪತ್ರ ಬರೆದಿದೆ.

ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದಲ್ಲಿ ಹೊರಗಿನ ಶಕ್ತಿಗಳು ನ್ಯಾಯಾಂಗ ವಲಯದಲ್ಲಿ ಹಸ್ತಕ್ಷೇಪ ಮಾಡುವುದಕ್ಕೆ ಅವಕಾಶ ನೀಡಿದಂತಾಗಲಿದೆ ಎಂದು ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡು ವಿಚಾರಣೆ ನಡೆಸಬೇಕು. ಅಪರಾಧಿಗಳನ್ನು ಶಿಕ್ಷಿಸಿ, ನ್ಯಾಯಮೂರ್ತಿಗಳ ರಕ್ಷಣೆ ಖಚಿತಪಡಿಸಬೇಕು ಎಂದು ಪತ್ರದಲ್ಲಿ ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News