×
Ad

ಹೆಚ್ಚುವರಿಯಗಿ 1 ಲಕ್ಷ ಮೆಟ್ರಿಕ್ ಟನ್ ಜೋಳ ಖರೀದಿಸಲು ತೀರ್ಮಾನ : ಸಚಿವ ಕೆ.ಎಚ್.ಮುನಿಯಪ್ಪ

Update: 2025-04-22 20:21 IST

ಕೆ.ಎಚ್.ಮುನಿಯಪ್ಪ

ಬೆಂಗಳೂರು : ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಹೆಚ್ಚಿನ ಜೋಳವನ್ನು ಬೆಳೆಯುವ ಜಿಲ್ಲೆಗಳಲ್ಲಿ(ಬಳ್ಳಾರಿ, ರಾಯಚೂರು, ವಿಜಯನಗರ) ಬೆಂಬಲ ಬೆಲೆ ಯೋಜನೆಯಡಿ 2024-2025ನೆ ಸಾಲಿನಲ್ಲಿ ಒಂದು ಲಕ್ಷ ಮೆಟ್ರಿಕ್ ಟನ್ ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಮಂಗಳವಾರ ವಿಕಾಸಸೌಧದಲ್ಲಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಪ್ರತಿ ಕ್ವಿಂಟಾಲ್ ಜೋಳದ ದರ ಹೈಬ್ರೀಡ್ 3,371 ರೂ., ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ 3,421 ರೂ. ದರ ನಿಗದಿಪಡಿಸಲಾಗಿದೆ ಎಂದು ಹೇಳಿದರು.

ಈಗಾಗಲೇ ನೊಂದಾಯಿಸಿದ ರೈತರು ಹಾಗೂ ಹೊಸದಾಗಿ ನೊಂದಾಯಿಸುವ ರೈತರು ತಾವು ಬೆಳೆದ ಬೆಳೆಯನ್ನು ನಿರ್ದಿಷ್ಟ ಖರೀದಿ ಕೇಂದ್ರದ ಸ್ಥಳದಲ್ಲಿ ನೊಂದಣಿ ಮಾಡಿಕೊಂಡು ಸರಕಾರಕ್ಕೆ ನೀಡುವಂತೆ ಕೋರಿದ ಅವರು, ಅನ್ನ ಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ 5 ಕೆಜಿ ಪಡಿತರ ಧಾನ್ಯ ನೀಡುತ್ತಿದ್ದು, ಉತ್ತರ ಕರ್ನಾಟಕದ ಭಾಗದಲ್ಲಿ 2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳವನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಯ ರೈತರ ನಿಯೋಗವು ಸಚಿವರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿತ್ತು.

ವಿಧಾನಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ವಸತಿ ಇಲಾಖೆಯ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಹಾರ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್, ಆಯುಕ್ತೆ ವಾಸಿರೆಡ್ಡಿ ವಿಜಯ ಜೋತ್ನಾ, ರೈತ ಸಂಘದ ಮುಖಂಡರಾದ ರಘುನಾಥ್, ಮಾದವರೆಡ್ಡಿ ಕರೂರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News