×
Ad

ಸಿಎಸ್ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಹೇಳಿಕೆ: ಎಫ್ಐಆರ್ ರದ್ದು ಕೋರಿ ರವಿಕುಮಾರ್ ಹೈಕೋರ್ಟ್ ಮೊರೆ

Update: 2025-07-04 11:29 IST

 ಎನ್.ರವಿಕುಮಾರ್

ಬೆಂಗಳೂರು: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ತನ್ನ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ವಿಧಾನ ಪರಿಷತ್ ನ ಬಿಜೆಪಿಯ ಮುಖ್ಯ ಸಚೇತಕ ಎನ್. ರವಿಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ರವಿಕುಮಾರ್ ವಿರುದ್ಧ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನಾ ಎಂಬವರು ವಿಧಾನಸೌಧದಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರ ಮೇಲೆ ಎಫ್ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಇದರಿಂದ ಬಂಧನ ಭೀತಿ ಎದುರಿಸುತ್ತಿರುವ ರವಿಕುಮಾರ್ ಪ್ರಕರಣದ ರದ್ದುಗೊಳಿಸುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಇಂದು(ಜು.4) ಮಧ್ಯಾಹ್ನ ಹೈಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News