ದೇವೇಗೌಡರ ಪತ್ನಿ ಚೆನ್ನಮ್ಮರ ಆರೋಗ್ಯದಲ್ಲಿ ಒಂದಿಷ್ಟು ಸುಧಾರಣೆ: ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ. ಸತ್ಯನಾರಾಯಣ

Update: 2026-07-18 11:45 IST

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮರ ಆರೋಗ್ಯದಲ್ಲಿ ಒಂದಿಷ್ಟು ಸುಧಾರಣೆ ಕಂಡುಬಂದಿದೆ ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ.ಸತ್ಯನಾರಾಯಣ ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಡಾ. ಸತ್ಯನಾರಾಯಣ, ಚೆನ್ನಮ್ಮರಿಗೆ ಶುಕ್ರವಾರ ರಾತ್ರಿ ಉಸಿರಾಟದ ಸಮಸ್ಯೆ ಒಂದಿಷ್ಟು ತೀವ್ರವಾಗಿತ್ತು. ಆದರೆ ಶುಕ್ರವಾರಕ್ಕಿಂತ ಶನಿವಾರ ಬೆಳಗ್ಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

ಸದ್ಯ ಉಸಿರಾಟದ ತೊಂದರೆ ಶೇ.20ರಿಂದ 30ರಷ್ಟು ಹತೋಟಿಗೆ ಬಂದಿದೆ. ರಕ್ತದೊತ್ತಡ ಸೇರಿದಂತೆ ಇತರ ಆರೋಗ್ಯದ ಮಾನದಂಡಗಳು ಸ್ಥಿರವಾಗಿವೆ ಎಂದು ವೈದ್ಯರು ಹೇಳಿದ್ದಾರೆ.

ಅವರ ಸಂಪೂರ್ಣ ಚೇತರಿಕೆಗೆ ಇನ್ನೂ ಸಮಯ ಬೇಕಾಗಲಿದ್ದು, ಚಿಕಿತ್ಸೆ ಮುಂದುವರಿಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿದ್ದರಿಂದ ಚೆನ್ನಮ್ಮರನ್ನು ಮೂರು ದಿನಗಳ ಹಿಂದೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News