×
Ad

ಧರ್ಮಸ್ಥಳ ಪ್ರಕರಣ: ತನ್ನ ಮೇಲಿನ ಆರೋಪಕ್ಕೆ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ

Update: 2026-06-12 10:58 IST

Prakash Raj (Photo credit: wikipedia)

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ತನ್ನ ಹೆಸರು ಚರ್ಚಿಸಲ್ಪಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್, ''ಗಾಳಿಮಾತುಗಳನ್ನು... ಮತ್ತು ಕೆಲವು ದುರುಳರು ಈ ಸುದ್ದಿಗೆ ಕಟ್ಟಲೆತ್ನಿಸುತ್ತಿರುವ ರೆಕ್ಕೆ ಪುಕ್ಕಗಳನ್ನು ನಂಬದಿರಿ'' ಎಂದು ವಿನಂತಿ ಮಾಡಿದ್ದಾರೆ.

ಈ ಕುರಿತು 'ಎಕ್ಸ್'ನಲ್ಲಿ ಪೋಸ್ಟ್ ವೊಂದನ್ನು ಹಾಕಿರುವ ಪ್ರಕಾಶ್ ರಾಜ್, "ಸದ್ಯ ತಾನು ದೂರದ ಊರಿನಲ್ಲಿದ್ದೇನೆ. ಇನ್ನೆರಡು ದಿನಗಳಲ್ಲಿ ನಾನೇ ಸ್ವತಃ ಬಂದು ಮಾಧ್ಯಮದ ಮೂಲಕ ಉತ್ತರಿಸುತ್ತೇನೆ. ಅಲ್ಲಿಯವರೆಗೆ ಗಾಳಿಮಾತುಗಳನ್ನು ನಂಬದಿರಿ ಎಂದು ಹೇಳಿದ್ದಾರೆ,

"ಎಲ್ಲರಿಗೂ ನಮಸ್ಕಾರ.. ಮಾಧ್ಯಮಗಳಲ್ಲಿ… ಸಾಮಾಜಿಕ ಜಲತಾಣಗಳಲ್ಲಿ ಧರ್ಮಸ್ಥಳ ಪ್ರಕರಣದ ಕುರಿತಂತೆ ನನ್ನ ಬಗ್ಗೆ ಕೆಲವು ಸುದ್ದಿ ಚರ್ಚಿಸಲ್ಪಡುತ್ತಿರುವು ನನ್ನ ಗಮನಕ್ಕೆ ಬಂದಿದೆ. ಇದು ಅತಿ ಸೂಕ್ಷ್ಮವಾದ .. ಮತ್ತು ಕೋಟ್ಯಂತರ ಭಕ್ತರ ನಂಬಿಕೆಗೆ ಧಕ್ಕೆ ತಂದಿರುವ ಪ್ರಕರಣವಾಗಿರುವುದರಿಂದ ಈ ರೀತಿಯ ಅನುಮಾನಗಳಿಗೆ ಉತ್ತರಿಸಬೇಕಾಗಿರುವುದು ನನ್ನ ಕರ್ತವ್ಯವೂ ಆಗಿದೆ. ನಾನು ದೂರದೂರಿನಲ್ಲಿದ್ದೇನೆ. ಇನ್ನೆರಡು ದಿನಗಳಲ್ಲಿ ನಾನೇ ಸ್ವತಃ ಬಂದು ಮಾಧ್ಯಮ ಮಿತ್ರರ ಮುಖೇನ ಉತ್ತರಿಸುತ್ತೇನೆ. ಅಲ್ಲಿಯವರೆಗೆ ಗಾಳಿಮಾತುಗಳನ್ನು... ಮತ್ತು ಕೆಲವು ದುರುಳರು ಈ ಸುದ್ದಿಗೆ ಕಟ್ಟಲೆತ್ನಿಸುತ್ತಿರುವ ರೆಕ್ಕೆ ಪುಕ್ಕಗಳನ್ನು ನಂಬದಿರಿ'' ಎಂದು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಅಂತಿಮ ವರದಿಯನ್ನು ಸಲ್ಲಿಸಲು ಎಸ್ಐಟಿಗೆ ನಿರ್ದೇಶಿಸಬೇಕು ಎಂದು ಕೋರಿ ಈ ಪ್ರಕರಣದ ಆರಂಭದಲ್ಲಿ ಸಾಕ್ಷಿ ದೂರುದಾರನಾಗಿದ್ದ ಸಿ.ಎನ್.ಚಿನ್ನ ಅಲಿಯಾಸ್ ಚಿನ್ನಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಈ ಬಗ್ಗೆ ಚಿನ್ನಯ್ಯ ಹೈಕೋರ್ಟ್ ಗೆ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರೂ ಉಲ್ಲೇಖಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News