×
Ad

ಈ.ಡಿಯನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿರುವ ಮೋದಿ ಸರಕಾರ : ದಿನೇಶ್ ಗುಂಡೂರಾವ್

Update: 2025-06-12 18:29 IST

ದಿನೇಶ್ ಗುಂಡೂರಾವ್

ಬೆಂಗಳೂರು : ‘ಸಾಂವಿಧಾನಿಕ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯ(ಈಡಿ)ವನ್ನು ಮೋದಿ ಸರಕಾರ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಈ.ಡಿ. ರಾಜಕೀಯ ಪಕ್ಷವೊಂದರ ಆಜ್ಞಾಪಾಲಕರಾದರೆ ಆ ಸಂಸ್ಥೆಗೆ ಸಾಂವಿಧಾನಿಕ ಪಾವಿತ್ರ್ಯತೆ ಇರಲು ಹೇಗೆ ಸಾಧ್ಯ? ಆ ಸಂಸ್ಥೆಯಿಂದ ಪ್ರಜಾಪ್ರಭುತ್ವದ ಮೌಲ್ಯ ಉಳಿಯಲು ಹೇಗೆ ಸಾಧ್ಯವೇ?’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದಿಲ್ಲಿ ಪ್ರಶ್ನಿಸಿದ್ದಾರೆ.

ಗುರುವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿದೆ. ಜಾರಿ ನಿರ್ದೇಶನಾಲಯದ ವೈಶಿಷ್ಟ್ಯವೇನೆಂದರೆ ಅದು ದಾಳಿ ಮಾಡುವುದು ಬಿಜೆಪಿಯೇತರ ನಾಯಕರ ಮೇಲೆ ಮಾತ್ರ. ಇಲ್ಲಿಯವರೆಗೂ ಈ.ಡಿ. ಬಿಜೆಪಿ ನಾಯಕರ ತಂಟೆಗೆ ಹೋಗುವುದು ಇಲ್ಲ. ಇದೊಂದು ವಿಸ್ಮಯ’ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.

‘ಕಾಂಗ್ರೆಸ್ ನಾಯಕರನ್ನೇ ನಿರ್ಧಿಷ್ಟವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸುವ ‘ಜಾರಿ ನಿರ್ದೇಶನಾಲಯ' ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ' ಎಂದು ಬದಲಾಯಿಸಿಕೊಳ್ಳುವುದು ಸೂಕ್ತ. ಯಾಕೆಂದರೆ ಜಾರಿ ನಿರ್ದೇಶನಾಲಯದ ಪ್ರೈಮ್ ಟಾರ್ಗೆಟ್ ಕಾಂಗ್ರೆಸ್ ನಾಯಕರೆ ಹೊರತು ಬಿಜೆಪಿಯವರಲ್ಲ’ ಎಂದು ದಿನೇಶ್ ಗುಂಡೂರಾವ್ ಆಕ್ಷೇಪಿಸಿದ್ದಾರೆ.

‘ಇತ್ತೀಚೆಗಷ್ಟೇ ತಮಿಳುನಾಡಿನ ಟಿಎಎಸ್‍ಎಂಎಸಿ ಹಗರಣದಲ್ಲಿ ಈಡಿ ನಡೆಯನ್ನು ಸುಪ್ರೀಂ ಕೋರ್ಟ್ ಕಟು ಮಾತುಗಳಲ್ಲಿ ಟೀಕಿಸಿದೆ. ಈ.ಡಿ ಎಲ್ಲ ಮಿತಿಗಳನ್ನು ಮೀರುತ್ತಿದೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಆದರೂ ಈ.ಡಿ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ’ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News