×
Ad

ಆಂಬ್ಯುಲೆನ್ಸ್ ಸೇವೆಯನ್ನು ಕೆಪಿಎಂಇ ಅಡಿ ತರಲು ಕ್ರಮ : ದಿನೇಶ್ ಗುಂಡೂರಾವ್

Update: 2025-08-04 21:00 IST

ಬೆಂಗಳೂರು : ಖಾಸಗಿ ಆಂಬ್ಯುಲೆನ್ಸ್ ಸೇವೆಯ ದರ ನಿಗದಿ ಸೇರಿದಂತೆ ನಿರ್ವಹಣೆಗಾಗಿ ಆಂಬ್ಯುಲೆನ್ಸ್‌ ಗಳನ್ನು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯಿದೆ(ಕೆಪಿಎಂಇ) ಅಡಿಯಲ್ಲಿ ಸೇರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿಯವರೆಗೂ ಆಂಬ್ಯುಲೆನ್ಸ್ ಸೇವೆಗಳಿಗೆ ಆರೋಗ್ಯ ಇಲಾಖೆಯಿಂದ ನೋಂದಣಿಯಾಗಲಿ, ಮಾನ್ಯತೆಯಾಗಿಲಿ ನಿಗದಿ ಮಾಡಿಲ್ಲ. ಹೀಗಾಗಿ ಖಾಸಗಿ ಆಂಬ್ಯುಲೆನ್ಸ್‌ ಗಳು ಹೆಚ್ಚಿನ ಹಣವನ್ನು ಪಡೆಯುತ್ತಿವೆ. ಆದುದರಿಂದ ಕೆಪಿಎಂಇ ಅಡಿಯಲ್ಲಿ ಆಂಬ್ಯುಲೆನ್ಸ್ ಸೇವೆ ನೋಂದಣಿ ಮಾಡಲಾಗುತ್ತದೆ ಎಂದು ತಿಳಿಸಿದರು.

ಇತ್ತೀಚೆಗೆ ಆಂಬ್ಯುಲೆನ್ಸ್‌ ನಲ್ಲಿ ಸರಿಯಾದ ಸೌಲಭ್ಯಗಳು ಇಲ್ಲದಾಗಿದೆ. ಆಂಬ್ಯುಲೆನ್ಸ್‌ ನಲ್ಲಿ ಎಲ್ಲ ರೀತಿಯ ಸೌಲಭ್ಯಗಳು ಇರುವಂತೆ ಮಾಡಲು ನೋಂದಣಿಯನ್ನು ತರಲಾಗುತ್ತಿದೆ. ಹಾಗೆಯೇ ಮೊಬೈಲ್ ಮೆಡಿಕಲ್ ಯೂನಿಟ್ ಅನ್ನು ಕೆಪಿಎಂಇ ಅಡಿ ತರಲಾಗುತ್ತದೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News