×
Ad

ಸೇವಾ ಮನೋಭಾವ ಹೊಂದಿರುವ ವೈದ್ಯರ ಸೇವೆ ಅಗತ್ಯ : ದಿನೇಶ್ ಗುಂಡೂರಾವ್

Update: 2024-08-25 21:59 IST

ಬೆಂಗಳೂರು : ಆರೋಗ್ಯ ಕ್ಷೇತ್ರ ವ್ಯಾಪಾರೀಕರಣವಾಗುತ್ತಿರುವ ಈ ಸಂಧರ್ಭದಲ್ಲಿ ಸಮಾಜದಲ್ಲಿ ಸೇವಾ ಮನೋಭಾವ ಹೊಂದಿರುವ ವೈದ್ಯರ ಸೇವೆ ಅಗತ್ಯ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.

ರವಿವಾರ ನಗರದ ಕನಕಪುರ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಧೀ’ 207 ಬೆಡ್‍ಗಳ ಸುಪರ್ ಸ್ಪೇಷಾಲಿಟಿ ಆಸ್ಪತ್ರೆಯ ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೋಗ್ಯ ರಕ್ಷಣೆಯಲ್ಲಿ ಸರಕಾರದ ಜವಾಬ್ದಾರಿ ಹೆಚ್ಚಿದ್ದು, ಆರೋಗ್ಯವಂತ ಸಮಾಜ ನಿರ್ಮಿಸುವುದು ನಮ್ಮ ಗುರಿಯಾಗಿದೆ.

ಹೃದಯಜ್ಯೋತಿ ಯೋಜನೆಯಿಂದಾಗಿ ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆದು ಪ್ರಾಣ ಉಳಿಸಿಕೊಳ್ಳುತ್ತಿದ್ದಾರೆ. ಇದುವರೆಗೂ ಸುಮಾರು 20ಕ್ಕೂ ಹೆಚ್ಚು ಜನರು ಪ್ರಾಣಾಪಾಯದಿಂದ ಪಾರಾಗಿದ್ದು, ಈ ಯೋಜನೆಯನ್ನು ರಾಜ್ಯದ ಎಲ್ಲ ತಾಲ್ಲೂಕುಗಳಿಗೂ ವಿಸ್ತರಿಸಲಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗುರುದೇವ್ ರವಿಶಂಕರ್ ಗುರೂಜಿ, ಆಸ್ಪತ್ರೆಯ ಸಿಇಒ ಡಾ. ಚಂದ್ರಶೇಖರ್ ಚಿಕ್ಕಮುನಿಯಪ್ಪ, ಶಿಕ್ಷಣ ತಜ್ಞ ಡಾ. ಗುರುರಾಜ್ ಕರಜಗಿ, ರೋಟರಿ ಫೌಂಡೇಶನ್ ನ ಏಷ್ಯಾದ ರಾಯಭಾರಿ ಹಾಗೂ ಮಹಾದಾನಿ ರವಿಶಂಕರ್ ದಕೋಜು ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News