×
Ad

ರಾಮನಗರ ಎಸ್ಐಆರ್ ಪ್ರಕರಣದಲ್ಲಿ ರಾಜ್ಯ ಸರಕಾರದ ನೇರ ಹಸ್ತಕ್ಷೇಪ: ಪ್ರಹ್ಲಾದ್ ಜೋಶಿ ಆರೋಪ

Update: 2026-07-03 12:39 IST

ಪ್ರಹ್ಲಾದ್ ಜೋಶಿ

ಬೆಂಗಳೂರು, ಜು.3: ರಾಮನಗರದಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ರಾಜ್ಯ ಸರಕಾರದ ನೇರ ಹಸ್ತಕ್ಷೇಪ ಮತ್ತು ರಾಜಕೀಯ ಪ್ರಭಾವ ಎದ್ದು ಕಾಣುತ್ತಿದೆ ಎಂದು ಆರೋಪಿಸಿರುವ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ, ತ್ವರಿತವಾಗಿ ನಿಷ್ಪಕ್ಷ ತನಿಖೆ ನಡೆಸಬೇಕು ಆಗ್ರಹಿಸಿದ್ದಾರೆ.

ರಾಮನಗರದಲ್ಲಿ ನಡೆದ ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮ ನಡೆದಿದೆ. ಇದು ಪ್ರಜಾಪ್ರಭುತ್ವದ ಆಶಯಕ್ಕೆ ದ್ರೋಹ ಬಗೆದಂತಿದೆ ಎಂದು ಜೋಶಿ ಆಕ್ಷೇಪಿಸಿದ್ದಾರೆ.

ಕೇವಲ ರಾಜಕೀಯ ಲಾಭಕ್ಕಾಗಿ ಮತದಾರರ ಪಟ್ಟಿಯನ್ನು ತಮಗೆ ಬೇಕಾದಂತೆ ತಿರುಚಲು ಸರಕಾರದ ಉನ್ನತ ಮಟ್ಟದಿಂದಲೇ ವ್ಯವಸ್ಥಿತವಾಗಿ ಸಂಚು ರೂಪಿಸಿದಂತಿದೆ ಎಂದು ಕೇಂದ್ರ ಸಚಿವರು ಆರೋಪಿಸಿದ್ದಾರೆ.

ಸ್ವತಂತ್ರವಾಗಿ ನಡೆಯಬೇಕಾದ ಈ ಒಂದು ಸಾಂವಿಧಾನಿಕ ಪ್ರಕ್ರಿಯೆಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಈ ರೀತಿಯ ಹಸ್ತಕ್ಷೇಪ ಮತ್ತು ಸ್ಥಳೀಯ ಆಡಳಿತದ ಮೇಲಿನ ಒತ್ತಡ ಅತ್ಯಂತ ಖಂಡನೀಯ ಎಂದಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನಿಯಮಾವಳಿ, ಮಾರ್ಗಸೂಚಿಗಳನ್ನು ಸಂಪೂರ್ಣ ಗಾಳಿಗೆ ತೂರಿ, ಸ್ಥಳೀಯ BLOಗಳನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಈ ಪರಿಷ್ಕರಣೆ ಕಾನೂನುಬಾಹಿರ ಎಂದು ಜೋಶಿ ಆರೋಪಿಸಿದ್ದಾರೆ.

ಈ ಬೃಹತ್ ಹಗರಣದ ಹಿಂದೆ ಯಾರ ಹಿತಾಸಕ್ತಿ ಅಡಗಿದೆ? ಎಂಬುದನ್ನು ಪತ್ತೆ ಹಚ್ಚಬೇಕು. ಜನಸಾಮಾನ್ಯರ ಧ್ವನಿ ಹತ್ತಿಕ್ಕಲು ನಡೆಸುತ್ತಿರುವ ಈ ವ್ಯವಸ್ಥಿತ ಪಿತೂರಿಯ ವಿರುದ್ಧ ತಕ್ಷಣವೇ ನಿಷ್ಪಕ್ಷ ಹಾಗೂ ಸಮಗ್ರ ತನಿಖೆಯಾಗಬೇಕು ಎಂದು ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News