×
Ad

ಸುಹಾಸ್ ಶೆಟ್ಟಿ ಹತ್ಯೆಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳಬಾರದು: ಡಿ.ಕೆ.ಶಿವಕುಮಾರ್

Update: 2025-05-02 17:01 IST

ಬೆಂಗಳೂರು : “ಸುಹಾಸ್ ಶೆಟ್ಟಿ ಹತ್ಯೆಯನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಕರ್ನಾಟಕ ರಾಜ್ಯ ಶಾಂತಿಯಿಂದಿದೆ. ಶಾಂತಿಯಿಂದ ಇರುವುದಕ್ಕೆ ಬಿಜೆಪಿಯವರು ಸಹಕಾರ ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಬಗ್ಗೆ ಕೇಳಿದಾಗ, “ಹತ್ಯೆಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರ ವಿರುದ್ಧ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ ನಾವು ತಲೆಹಾಕಲು ಹೋಗುವುದಿಲ್ಲ” ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮಂಗಳೂರಿನ ಪೊಲೀಸರು ಉತ್ತಮ ಸಾಮರ್ಥ್ಯ ಹೊಂದಿದ್ದಾರೆ. ಈ ಘಟನೆ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News