×
Ad

'ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ' ಆಡಬೇಡಿ: ಛಲವಾದಿ ನಾರಾಯಣಸ್ವಾಮಿಗೆ ಡಿಕೆಶಿ ತಿರುಗೇಟು

Update: 2025-12-05 15:24 IST

ಡಿ.ಕೆ.ಶಿವಕುಮಾರ್

ಬೆಂಗಳೂರು : "ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..? 'ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ' ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ್ದಾರಿಯನ್ನು ವಿವೇಕದಿಂದ ನಿರ್ವಹಿಸಿ. ಅವಿವೇಕಿಯಂತೆ ಆಡಬೇಡಿ..! ಬೇಕಿದ್ದರೆ ಲೋಕಾಯುಕ್ತ ಕಚೇರಿಗೆ ಹೋಗಿ ನನ್ನ ಅಫಿಡವಿಟ್ ಚೆಕ್ ಮಾಡಿಕೊಳ್ಳಿ"

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರ್ಟಿಯರ್ ಕಂಪೆನಿ ವಾಚ್ ಧರಿಸಿದ್ದು, ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಮಾಹಿತಿ ನೀಡಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾಡಿರುವ ಆರೋಪಕ್ಕೆ ಡಿಕೆಶಿ ಈ ರೀತಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಲೋಕಾಯುಕ್ತಕ್ಕೆ ಸಲ್ಲಿಸಿರುವ ಅಫಿಡವಿಟ್ ಪ್ರತಿಯನ್ನು ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಡಿಸಿಎಂ, '' ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್! ಜವಾಬ್ದಾರಿಯುತ ಸ್ಥಾನದಲ್ಲಿರೋ ನೀವು ನಿಮ್ಮ ಬಾಯಿ ತೆವಲಿಗಾಗಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳಬಾರದು. ಇದು ನಿಮಗೆ ಘನತೆ ತರುವುದಿಲ್ಲ! ನಾನು ಪಾರದರ್ಶಕ ವ್ಯಕ್ತಿ. ಏನನ್ನೂ ಮುಚ್ಚಿಟ್ಟುಕೊಳ್ಳಬಾರದು ಅಂತಲೇ ನಿಜ ಹೇಳಿದ್ದೇನೆ'' ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News