ಕೃಷಿ ಅಧಿಕಾರಿಗಳ ನೇಮಕಾತಿ ಗೊಂದಲ: ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಪ್ರತಿಭಟನಾನಿರತ ಜಿಕೆವಿಕೆ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಡಿ.ಕೆ.ಶಿವಕುಮಾರ್

Update: 2026-08-04 14:51 IST

ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.4: 'ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಮಾಡಲಾದ ನಿಯಮಗಳ ತಿದ್ದುಪಡಿಯಿಂದಾಗಿ ಕೃಷಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ' ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ.

14ನೇ ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ ಸ್ಥಳದ ಬಳಿ ತಮಗೆ ಮನವಿ ಸಲ್ಲಿಸಲು ಮಂಗಳವಾರ ಬಂದಿದ್ದ ಜಿಕೆವಿಕೆ ಕೃಷಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಗಮನಿಸಿದ ಮುಖ್ಯಮಂತ್ರಿ, ಅವರನ್ನು ಹತ್ತಿರ ಕರೆದು ಮಾತನಾಡಿದರು.

ವಿದ್ಯಾರ್ಥಿಗಳ ಅಹವಾಹಲು ಆಲಿಸಿದ ನಂತರ “ಪ್ರತಿಭಟನೆ ಕೈ ಬಿಡಿ. ನಮ್ಮ ಸರಕಾರ ನಿರುದ್ಯೋಗ ನಿರ್ಮೂಲನಕ್ಕೆ ಕ್ರಮ ತೆಗೆದುಕೊಂಡಿದೆ. ನಿಮಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News