×
Ad

ಬಿಜೆಪಿ ಪರಿಷತ್‌ ಸದಸ್ಯ ಕೆ.ಪಿ.ನಂಜುಂಡಿ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಭೇಟಿ

Update: 2024-04-07 21:45 IST

Photo :x/@DKShivakumar

ಬೆಂಗಳೂರು : ಲೋಕಸಭೆ ಚುನಾವಣೆಯ ಅಬ್ಬರದ ಪ್ರಚಾರದ ನಡುವೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಕೆ.ಪಿ. ನಂಜುಂಡಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಉಪಹಾರ ಕೂಟದಲ್ಲಿ ಭಾಗವಹಿಸುವ ಮೂಲಕ ರಾಜಕೀಯ ಕುತೂಹಲ ಕೆರಳಿಸಿದ್ದಾರೆ.

ವಿಶ್ವಕರ್ಮ ಸಮುದಾಯದ ಪ್ರಭಾವಿ ನಾಯಕರೂ ಆಗಿರುವ ಕೆ.ಪಿ.ನಂಜುಂಡಿ, ಈ ಮೊದಲು ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ ಅವಧಿಯ ಸೇವೆ ಸಲ್ಲಿಸಿದ್ದರು. ವಿಧಾನ ಪರಿಷತ್ ಸದಸ್ಯ ಸ್ಥಾನ, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟರಾದರೂ ಕಾಂಗ್ರೆಸ್‍ನಲ್ಲಿ ಮನ್ನಣೆ ಸಿಗಲಿಲ್ಲ. ಹೀಗಾಗಿ ಬಿಜೆಪಿ ಸೇರಿ ಪರಿಷತ್ ಸದಸ್ಯರಾಗಿದ್ದರು.

ಮುಂದಿನ ಜೂನ್ ವೇಳೆಗೆ ಅವರ ಅಧಿಕಾತಾವಧಿ ಪೂರ್ಣಗೊಳ್ಳಲಿದೆ. ಈ ನಡುವೆ ಕಾಂಗ್ರೆಸ್ ಅಧ್ಯಕ್ಷರ ಜೊತೆ ನಂಜುಂಡಿ ಅವರು ಉಪಹಾರ ಕೂಟ ನಡೆಸಿರುವುದು ಕುತೂಹಲ ಕೆರಳಿಸಿದೆ. ಉಭಯರು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆಂದು ಗೊತ್ತಾಗಿದೆ. ಈ ವೇಳೆ ನಂಜುಂಡಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News