ಪರಮೇಶ್ವರ್ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಭೇಟಿ
Update: 2026-06-03 11:25 IST
ಬೆಂಗಳೂರು, ಜೂ.3: ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸದಾಶಿವ ನಗರದಲ್ಲಿನ ಡಾ.ಜಿ ಪರಮೇಶ್ವರ್ ಅವರ ನಿವಾಸಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದರು.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ವೇಳೆ 10ರಿಂದ 14 ಮಂದಿ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.