ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು : ವಿಧಾನ ಮಂಡಲ ವಿಶೇಷ ಅಧಿವೇಶನದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಂಪುಟದ ಸಚಿವರು, ಪಕ್ಷದ ಶಾಸಕರು ಹಾಗೂ ಪರಿಷತ್ ಸದಸ್ಯರು ಪಾಲ್ಗೊಂಡಿದ್ದರು.