×
Ad

ಬೆಂಗಳೂರಿನಲ್ಲಿ ಭಾರೀ ಮಳೆ: ಬಿಬಿಎಂಪಿ ಕೇಂದ್ರ ಕಛೇರಿ ನಿಯಂತ್ರಣ ಕೊಠಡಿಗೆ ಡಿ.ಕೆ. ಶಿವಕುಮಾರ್ ಭೇಟಿ

Update: 2024-10-15 23:13 IST

ಬೆಂಗಳೂರು: ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಿಬಿಎಂಪಿ ಕೇಂದ್ರ ಕಛೇರಿಯ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಎಲ್ಲ ವಲಯ ಅಧಿಕಾರಿಗಳ ಜೊತೆ ವರ್ಚ್ಯುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆ ವಿಚಾರ, ನಿಯಂತ್ರಣ ಕೊಠಡಿಯಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ, ಸ್ಚಚ್ಛತಾ ಡ್ರೈವ್ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ಚರ್ಚಿಸಿದರು.

ಬಿಡಿಎ ಅಧ್ಯಕ್ಷ ಎನ್.ಎ ಹಾರೀಸ್, ಆಡಳಿತಗಾರ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್, ಬಿಡಿಎ ಆಯುಕ್ತ ಜಯರಾಮ್, ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಬಿ.ಎಂ.ಆರ್.ಡಿ.ಎ ಆಯುಕ್ತರಾದ ರಾಜೇಂದ್ರ ಚೋಳನ್, ಪ್ರಧಾನ ಅಭಿಯಂತರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News