×
Ad

ಡಿಕೆಶಿ ಫೋಟೋ ಮಾರ್ಫಿಂಗ್ :‌ ಮೂವರ ವಿರುದ್ಧ ಎಫ್‌ಐಆರ್‌ ದಾಖಲು

Update: 2024-05-02 21:53 IST

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಫೋಟೋ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಕೆಪಿಸಿಸಿ ಕಾನೂನು ಘಟಕದ ವತಿಯಿಂದ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದು, ಈ ಸಂಬಂಧ ಮೊಕದ್ದಮೆ ದಾಖಲಾಗಿದೆ.

ಫೇಸ್‍ಬುಕ್, ಯೂಟ್ಯೂಬ್ ಮತ್ತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರು ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ಎಂಬುವವರ ವಿರುದ್ಧ ಎಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ ಇದೀಗ ಡಿ.ಕೆ ಶಿವಕುಮಾರ್ ಅವರ ಎಡಿಟೆಟ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉದ್ದೇಶಪೂರಕವಾಗಿ ನಕಲಿ ಚಿತ್ರಗಳನ್ನು ವೈರಲ್ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ದೂರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News