×
Ad

ಪಕ್ಷ ಹಾಕಿದ ಲಕ್ಷ್ಮಣ ರೇಖೆ ದಾಟುವಂತಿಲ್ಲ: ಡಿ.ಕೆ.ಶಿವಕುಮಾರ್

Update: 2024-03-30 21:31 IST

ಬೆಂಗಳೂರು,: ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಕೆ.ಎಚ್.ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಜೊತೆ ಮಾತನಾಡಿದ್ದೇನೆ. ಅವರು ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ನಮ್ಮಲ್ಲಿ ಗುಂಪು ರಾಜಕಾರಣ ಇಲ್ಲ. ಯಾರೇ ಆಗಲಿ ಪಕ್ಷ ಹಾಕಿರುವ ಲಕ್ಷ್ಮಣ ರೇಖೆ ದಾಟುವಂತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸುವುದು, ಬಿಡುವುದು ನಂತರದ ವಿಷಯ. ಆದರೆ, ಪಕ್ಷದಲ್ಲಿ ಶಿಸ್ತು ತುಂಬಾ ಮುಖ್ಯ. ಯಾರೇ ಆಗಲಿ ಶಿಸ್ತು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಹೇಳಿದರು.

ಶಾಸಕರು, ಸಚಿವರು ಸೇರಿದಂತೆ ಎಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರಬೇಕು. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಭರವಸೆ ನೀಡಿದ್ದಾರೆ. ಗೌತಮ್ ಪಕ್ಷದ ನಿಷ್ಠಾವಂತ ಸಾಮಾನ್ಯ ಕಾರ್ಯಕರ್ತ, ಬೆಂಗಳೂರಿನ ಮಾಜಿ ಮೇಯರ್ ಪುತ್ರ. ಹೊಸ ಅಭ್ಯರ್ಥಿಗೆ ನಾವು ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಶಿವಕುಮಾರ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News