ಕೆಪಿಸಿಸಿ ಸದಸ್ಯತ್ವಕ್ಕೆ ಡಾ.ಅಕ್ಕಯ್ ಪದ್ಮಶಾಲಿ ರಾಜೀನಾಮೆ
ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷೆ, ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹಕ್ಕುಗಳ ಹೋರಾಟಗಾರ್ತಿ ಡಾ.ಅಕ್ಕಯ್ ಪದ್ಮಶಾಲಿ ಅವರು ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ʼತುಳಿತಕ್ಕೊಳಗಾದ ಹಾಗೂ ಶೋಷಿತ ಅಂತರ್ಲಿಂಗಿ, ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಯಕರ್ತೆಯರ ಸಮುದಾಯವು ಇಂದಿನ ಪ್ರಸ್ತುತ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ, ಕಾನೂನು, ಮೂಲಭೂತ ಹಕ್ಕುಗಳ ಹಾಗೂ ನೀತಿ ನಿರೂಪಣೆಗಳ ನೆಲಗಟ್ಟಿನಿಂದ ತೀರಾ ಹಿಂದುಳಿದಿದ್ದು, ನಮ್ಮ ಸಮುದಾಯವನ್ನು ರಾಜ್ಯಾದ್ಯಂತ ಸಂಘಟಿಸುವ ಸಾಮಾಜಿಕ ಜವಾಬ್ದಾರಿ ಹಾಗೂ ಸಂವಿಧಾನದ ನೈತಿಕತೆಯನ್ನು ಎತ್ತಿ ಹಿಡಿಯುವ ಜವಾಬ್ದಾರಿಯನ್ನು ನಿಭಾಯಿಸುವ ಸಲುವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.