×
Ad

ಡಾ.ಅಂಬೇಡ್ಕರ್ ಮಹಾನ್ ಮಾನವತಾವಾದಿ: ಶಾಸಕ ಗೋಪಾಲಯ್ಯ

Update: 2025-12-06 14:42 IST

ಬೆಂಗಳೂರು ಡಿ.6: ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರು ಅತ್ಯುನ್ನತ ಗ್ರಂಥವಾದ ಸಂವಿಧಾನವನ್ನು ರಚಿಸಿ ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಅವರ ಚಿಂತನೆ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿ ಎಂದು ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಕೆ ಗೋಪಾಲಯ್ಯ ನವರು ತಿಳಿಸಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರ ವಾರ್ಡಿನ ಶಾಸಕರ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ 69ನೇ ಪರಿನಿರ್ವಾಣ ದಿನದಂದು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಅಂಬೇಡ್ಕರ್ ರವರು ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಮಾನತೆ, ಹಕ್ಕು ಸಿಗಬೇಕು ಎಂದು ಹೋರಾಡಿದವರು. ಅಂಬೇಡ್ಕರ್ ಅವರ ಚಿಂತನೆ ಸಂವಿಧಾನ ಅವರ ಪುಸ್ತಕಗಳನ್ನು ಪ್ರತಿಯೊಬ್ಬರು ಓದಿ ಅಂಬೇಡ್ಕರ್ ಅವರನ್ನು ಅರಿತುಕೊಳ್ಳಬೇಕು. ಬಾಬಾ ಸಾಹೇಬರನ್ನು ಕಳೆದುಕೊಂಡು ಇಂದಿಗೆ 69 ವರ್ಷ ತುಂಬಿದೆ ಅವರನ್ನು ಸದಾ ಕಾಲ ಸ್ಮರಿಸಿಕೊಳ್ಳಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿವಾರ್ಡ್ ಅಧ್ಯಕ್ಷ ಲೋಕೇಶ್, ನಿಸರ್ಗ ಜಗದೀಶ್, ನಾರಾಯಣ್ ಸ್ವಾಮಿ, ಹನುಮಂತು, ಅಂಬರೀಷ್ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News