×
Ad

ಸರಕಾರಿ ಗೌರವಗಳೊಂದಿಗೆ ಡಾ.ಕೆ.ಕಸ್ತೂರಿ ರಂಗನ್ ಅಂತ್ಯಕ್ರಿಯೆ ನೆರವೇರಿಸಲು ಸರಕಾರ ಆದೇಶ

Update: 2025-04-26 18:24 IST

ಬೆಂಗಳೂರು : ನಿನ್ನೆ ನಿಧನರಾದ ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷ, ಖ್ಯಾತ ಬಾಹ್ಯಾಕಾಶ ವಿಜ್ಞಾನ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ.ಕೆ.ಕಸ್ತೂರಿ ರಂಗನ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಶನಿವಾರ ಈ ಸಂಬಂಧ ರಾಜ್ಯ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ರಾಜ್ಯ ಶಿಷ್ಟಾಚಾರ) ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಆದೇಶ ಹೊರಡಿಸಿದ್ದು, ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನಕ್ಕೆ ರಾಜ್ಯ ಸರಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News