×
Ad

ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಭಾರಿ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ನೇಮಕ

Update: 2024-01-31 22:03 IST

ಬೆಂಗಳೂರು: ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಭಾರಿ ನಿರ್ದೇಶಕರನ್ನಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ.ಕೆ.ಎಸ್.ರವೀಂದ್ರನಾಥ್ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಹಾಲಿ ನಿರ್ದೇಶಕರಾಗಿದ್ದ ಡಾ.ಸಿ.ಎನ್.ಮಂಜುನಾಥ್ ಅವರನ್ನು 2023ರ ಜು.20 ರಿಂದ 2024ರ ಜ.31ರವರೆಗೆ ಮುಂದುವರೆಸಲಾದ ಅವಧಿಯು ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ರವೀಂದ್ರನಾಥ್ ಅವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಭಾರಿ ನಿರ್ದೇಶಕರಾಗಿ ನೇಮಿಸಿ ಆದೇಶಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಆರ್.ಮಂಜುನಾಥ್ ಅಧಿಸೂಚನೆ ಹೊರಡಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News