×
Ad

ಚಿನ್ನಾಭರಣ ವಂಚನೆ ಪ್ರಕರಣ : ಐಶ್ವರ್ಯಾ ಗೌಡ ಈಡಿ ವಶಕ್ಕೆ

Update: 2025-04-25 19:36 IST

PC : PTI

ಬೆಂಗಳೂರು : ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಸೋಗಿನಲ್ಲಿ ಚಿನ್ನಾಭರಣ ವಂಚನೆ ಮಾಡಿದ್ದ ಆರೋಪ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಅನ್ನು ಜಾರಿ ನಿದೇಶನಾಲಯ (ಈಡಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಆರ್‌ಎಂಸಿ ಯಾರ್ಡ್‍ನಲ್ಲಿರುವ ಐಶ್ವರ್ಯಾ ಗೌಡ ಸೇರಿದಂತೆ ಇನ್ನಿತರರ ಮನೆಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಈ ವೇಳೆ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ, ಫೋನ್ ಕರೆ ವಿವರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಐಶ್ವರ್ಯಳನ್ನು ವಶಕ್ಕೆ ಪಡೆದು ಶಾಂತಿನಗರ ಈಡಿ ಕಚೇರಿಗೆ ಅಧಿಕಾರಿಗಳು ಕರೆತರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News